ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು ಮಹತ್ವದ ಮಾಹಿತಿ
ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ …