ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ ಮಂಗಳೂರಿನ ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 86 ವರ್ಷ ಪ್ರಾಯದ ಸುಕ್ರಿ ಬೊಮ್ಮಗೌಡ ಅವರು ಕಳೆದ 4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ನಾಲ್ಕು ದಿನಗಳಿಂದ ಈಚೆಗೆ ತಲೆಸುತ್ತು ಬರುತ್ತಿದ್ದುದರಿಂದ  ವೈದ್ಯರ ಸಲಹೆಯ ಮೇರೆಗೆ ಶನಿವಾರ ಮಧ್ಯಾಹ್ನ 12.30 ಗಂಟೆಗೆ ಹುಟ್ಟೂರು ಅಂಕೋಲಾದಿಂದ ಕರೆತಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಸುಕ್ರಿ ಬೊಮ್ಮಗೌಡ ಅವರಿಗೆ ಉಸಿರಾಟಕ್ಕೆ …

ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ ಮಂಗಳೂರಿನ ಆಸ್ಪತ್ರೆಗೆ ದಾಖಲು Read More »