ಉಪ್ಪಿನಂಗಡಿ : ಹಿಜಾಬ್ ಪಟ್ಟು ಸಡಿಲಿಸಿದ ವಿದ್ಯಾರ್ಥಿನಿಯರು; ಹಿಜಾಬ್ ಹೋರಾಟದ ಬಗ್ಗೆ ಹೆತ್ತವರಿಗೆ ಮಾಹಿತಿಯೇ ಇರಲಿಲ್ಲ!
ಉಪ್ಪಿನಂಗಡಿ: ಹೈಕೋರ್ಟ್ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ತರಗತಿಗೆ ಬರಲೆತ್ನಿಸಿದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ. ಸೋಮವಾರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರೂ ಅಮಾನತಾಗಿರುವ ವಿದ್ಯಾರ್ಥಿನಿಯರ ಪೈಕಿ ಹಲವರು ಮಂಗಳವಾರ ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಘಟನೆಯ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಘಟನೆಯ ಬಗ್ಗೆ …