News
Agriculture: ವಿಕಸಿತ ಕೃಷಿ ಸಂಕಲ್ಪ ಅಭಿಯಾನ – ಪೂರ್ವ ಮುಂಗಾರು ಕೃಷಿ ಜಾಗೃತಿ ಮಾಹಿತಿ
Agriculture: ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವ ದೆಹಲಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಮೇ 29 ರಿಂದ ಜೂನ್ 12 ರ 2025ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಬಿಸಲಾಗಿದ್ದು, ಇದರ ಅಂಗವಾಗಿ ದಿನಾಂಕ 31.05.2025 ರಂದು ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವ ಮುಂಗಾರು ಕೃಷಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡಲಾಯಿತು.

