ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಉಚಿತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆ ದಿನ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2022-23ರ ಶೈಕ್ಷಣಿಕ ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣಕ್ಕಾಗಿ 6,7,8,ಮತ್ತು 9ನೇ ತರಗತಿಗಳಿಗೆ ಅರ್ಹವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯಲು ಇದೊಂದು ಸುವರ್ಣಾವಕಾಶವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸ್ಪಷ್ಟ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳೊಂದಿಗೆ ಕಡ್ಡಾಯವಾಗಿ ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ – 574227 ಇವರಿಗೆ ದಿನಾಂಕ 10.03.2022ರ ಒಳಗೆ ತಲುಪುವಂತೆ ಕಳುಹಿಸಿಕೊಡಬೇಕು. …