ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ
ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತ ಅಥವಾ ವಿಶ್ವವಿದ್ಯಾನಿಲಯದವರು ನಡೆಸಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ 40 ವರ್ಷದೊಳಗಿನ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕ್ರೀಡಾಪಟುಗಳು ತಮ್ಮ ವೈಯಕ್ತಿಕ ವಿವರ ಮತ್ತು ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಒಂದು ಸಾವಿರ …