Basavaraj bommayi

ಸ್ತ್ರೀಶಕ್ತಿ ಸಂಘಗಳಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶವನ್ನು ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. …

ಸ್ತ್ರೀಶಕ್ತಿ ಸಂಘಗಳಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »

ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಮಂಗಳೂರು : ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶ ಗಮನಿಸಿ, ಮೊತ್ತ ಹೆಚ್ಚಳಕ್ಕೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ. ವರ್ಷ ಬಜೆಟ್‌ನಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಮಾರ್ಗದರ್ಶಿ ಆ್ಯಪ್ …

ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ Read More »

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಉಳಿದಿರುವಂತೆಯೇ ಪಕ್ಷದ ಕರ್ನಾಟಕ ಘಟಕದಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚಿನೆ ನೀಡಿದ್ದು,ಈ ನಡುವೆ ಬಿಜೆಪಿ ವರಿಷ್ಠರಾದ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಕೆಲವು ಭಾಗಗಳಲ್ಲಿ ಮೂಲೆಗುಂಪಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸೂಚನೆಗಳೂ ಇವೆ. ದೆಹಲಿಯ ಕಾರ್ಪೊರೇಷನ್ ಚುನಾವಣೆಯ ಸಮಯದಲ್ಲಿ, ನಾವು ಯಾವುದೇ ಹಾಲಿ ಕಾರ್ಪೊರೇಟರ್‌ಗಳಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದ್ದೇವೆ. ಗುಜರಾತ್ ನಾಗರಿಕ ಚುನಾವಣೆಯಲ್ಲಿ, ಎರಡು ಬಾರಿ ಕಾರ್ಪೊರೇಟರ್‌ಗಳಿಗೆ ಸಾಮೂಹಿಕ …

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ Read More »

ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ

ಎ.27ರಂದು ಬೆಳಿಗ್ಗೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಬೆಳಗ್ಗಿನ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಪಾಲ್ಗೊಂಡರು. ಇದೀಗ ಮುಖ್ಯಮಂತ್ರಿಗಳ ಪ್ರವಾಸದ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು,ಮಧ್ಯಾಹ್ನ3 ಗಂಟೆಗೆ ಮಂಗಳೂರು ತಲುಪಲಿದ್ದಾರೆ.

ದಿಢೀರ್ ಮಂಗಳೂರು ಪ್ರವಾಸ ರದ್ದು ಮಾಡಿದ ಮುಖ್ಯಮಂತ್ರಿ

ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಪಾಲ್ಗೊಳ್ಳಲು ವಾಪಾಸ್ ಆಗಿದ್ದಾರೆ ಎನ್ನಲಾಗಿದೆ.

ತನಿಖೆಯಾಗದೇ ಈಶ್ವರಪ್ಪ ರಾಜೀನಾಮೆ ಇಲ್ಲ -ಮುಖ್ಯಮಂತ್ರಿ

ಬೆಂಗಳೂರು : ಉಡುಪಿಯಲ್ಲಿ ನಡೆದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆಯಾಗುತ್ತಿದ್ದು,ತನಿಖೆಯ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇವೆ. ಈಶ್ವರಪ್ಪ ವಿಷಯದಲ್ಲಿ ಹೈಕಮಾಂಡ್ ನ ಮಧ್ಯ ಪ್ರವೇಶ ಏನೂ ಇಲ್ಲ. ಅವರು ಬರೀ ಮಾಹಿತಿ ಪಡೆದಿದ್ದಾರೆ ಅಷ್ಟೇ, ಆದರೆ ಇದರಲ್ಲಿ ಅವರ ಪಾತ್ರವೇನಿಲ್ಲ. ಪ್ರಾಥಮಿಕ ತನಿಖೆ ಆಗುವವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್ ಟಿ ನಗರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಈಶ್ವರಪ್ಪ ಬಂಧನಕ್ಕೆ …

ತನಿಖೆಯಾಗದೇ ಈಶ್ವರಪ್ಪ ರಾಜೀನಾಮೆ ಇಲ್ಲ -ಮುಖ್ಯಮಂತ್ರಿ Read More »

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಮಾತನಾಡಿದ ಅವರು ‘ಮಹಾಲಕ್ಷ್ಮೀ ಹೆಸರಿನಲ್ಲಿಯೇ ಶಕ್ತಿ ಇದೆ. ಮಹಾಲಕ್ಷ್ಮೀ ಕೃಪೆ ಆದವರು ಬದುಕಿನಲ್ಲಿ ಅತ್ಯಂತ ಯಶಸ್ವಿ ಆಗುತ್ತಾರೆ’ ಎಂದರು. ಸಾಹಸ ಅನ್ನುವುದು ಕರಾವಳಿ ಜನರ ಗುಣಧರ್ಮ ಆಗಿದೆ. ಮೊಗವೀರರದ್ದು ಸಾಹಸವೇ ಗುಣಧರ್ಮವಾಗಿದೆ. …

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ Read More »

‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಮೊದಲ ದಿನ ಭಾರತೀಯ ಬಾಕ್ಸಾಫೀಸ್​​ನಲ್ಲಿ ಸುಮಾರು ₹ 3.55 ಕೋಟಿ ಬಾಚಿಕೊಂಡಿತ್ತು. ಇದೀಗ ವಿಶ್ವಾದ್ಯಂತ ಸುಮಾರು 10.10 ಕೋಟಿ ರೂ ಗಿಂತ ಹೆಚ್ಚು ಹಣ ಕಲೆಕ್ಷನ್ ಮಾಡಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ಕೊರೋನ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ನೈಟ್ ಕರ್ಪ್ಯೂ ಜ.31ರಿಂದ ರದ್ದು

ಬೆಂಗಳೂರು:ಕೊರೋನಾ ಸೋಂಕು ಏರಿಕೆಕಂಡ ಕಾರಣ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿತ್ತು, ಇದೀಗ ತಜ್ಞರ ವರದಿ ಪ್ರಕಾರ ಪ್ರಕರಣಗಳ ಸಂಖ್ಯೆ ಕಡಿಮೆ ಆದ್ದರಿಂದ ರದ್ದುಪಡಿಲಾಗಿದೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಮಕ್ಕಳು ಮಾತ್ರವೇ …

ಕೊರೋನ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ನೈಟ್ ಕರ್ಪ್ಯೂ ಜ.31ರಿಂದ ರದ್ದು Read More »

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಬೃಹತ್ ಮಿಲಿಟರಿ ಶಾಲೆ ಪ್ರಾರಂಭ-ಬೊಮ್ಮಾಯಿ |ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಾಯಣ್ಣನ ಭಾವಚಿತ್ರ ಹಾಕಲು ಇಂದೇ ಆದೇಶ

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ಮುಖ್ಯಮಂತ್ರಿ, ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದರು. 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಈ ಉದ್ದೇಶಕ್ಕಾಗಿ 55 ಕೋಟಿ ರೂ.ಗಳನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದ್ದು,ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಪರಿಶೀಲನಾ ಕಾರ್ಯವೂ …

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಬೃಹತ್ ಮಿಲಿಟರಿ ಶಾಲೆ ಪ್ರಾರಂಭ-ಬೊಮ್ಮಾಯಿ |ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಾಯಣ್ಣನ ಭಾವಚಿತ್ರ ಹಾಕಲು ಇಂದೇ ಆದೇಶ Read More »

error: Content is protected !!
Scroll to Top