ಸೋಮವಾರ, 26 ಅಕ್ಟೋಬರ್ 2026
Trending

Book Release

News

Book Release: ಮೇ 31ಕ್ಕೆ ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕ ಬಿಡುಗಡೆ ಹಾಗೂ ದತ್ತಿನಿಧಿ ಕಾರ್ಯಕ್ರಮ

Book Release: ನಾಡಿನ ಪ್ರತಿಷ್ಠಿತ ಸಾಹಿತ್ಯಿಕ ಸಂಸ್ಥೆಯಾದ ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ಇದೇ ತಾರೀಖು 31ರ ಶನಿವಾರ ಪೂರ್ವಾಹ್ನ 10-00 ಗಂಟೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್'ನಲ್ಲಿ 'ಕೊಡವ ತಕ್ಕ್ ಎಳ್ತ್‌ಕಾರಡ ಕೂಟ'ದ 'ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆ'ಯಲ್ಲಿ ಲೇಖಕಿ ಉಳುವಂಗಡ ಕಾವೇರಿ ಉದಯ ಬರೆದ 190ನೆ ಹೆಜ್ಜೆಯ ಪುಸ್ತಕ, 17 ಲೇಖಕರು ಬರೆದ 191ನೆ ಹೆಜ್ಜೆಯ ಪುಸ್ತಕ ಹಾಗೂ ಲೇಖಕಿ ಕೊಟ್ಟಂಗಡ ಕವಿತ ವಾಸುದೇವ ಬರೆದ 192ನೇ ಹೆಜ್ಜೆಯ ನೂತನ ಮೂರು ಪುಸ್ತಕಗಳನ್ನು ಬಿಡುಗಡೆಗೊಳಿಸುವುದು, ಸಾಹಿತಿ ಮುದ್ದಿಯಡ ಕುಶ ಪೊನ್ನಪ್ಪ ದತ್ತಿನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಿಸುವುದು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡವ ಭಾಷೆಯ ಹಾಡುಗಾರಿಕೆ, ಓದುವುದು ಮತ್ತು ಹಾಸ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.