ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿ ಹಿಂಸೆ ನೀಡಿದ ಹಾಸ್ಟೆಲ್ ವಾರ್ಡನ್ |ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನೈ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿ, ದೌರ್ಜನ್ಯ ನಡೆಸಿದ್ದರಿಂದ ಆಕೆ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ತಕ್ಷಣ ಆಕೆಯನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ವೈದ್ಯರ ಚಿಕಿತ್ಸೆಗೆ ಸ್ಪಂದಿಸದ ಆಕೆ ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾಳೆ. ಲಾವಣ್ಯ ಎಂಬ 17 ವರ್ಷದ ಯುವತಿ ತಂಜಾವೂರಿನ ಸೇಂಟ್ ಮೈಕಲ್ಸ್ ಗರ್ಲ್ಸ್ ಹೋಮ್ ಎಂಬ ಹಾಸ್ಟೆಲ್ನಲ್ಲಿದ್ದುಕೊಂಡು ಓದುತ್ತಿದ್ದಳು. ಆ ಹಾಸ್ಟೆಲ್ನ ವಾರ್ಡನ್ ಆಕೆಯಿಂದ ಹಾಸ್ಟೆಲ್ನ ಎಲ್ಲಾ …