ಇಂದು ಸಂಜೆ ಸಿಎಂ ಬೊಮ್ಮಾಯಿ ತುರ್ತು ಸುದ್ದಿಗೊಷ್ಠಿ!
ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ದಿಢೀರ್ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಕೊರೊನಾ ವಿಷಯದ ಬಗ್ಗೆ ಎಂದು ಹಲವರು ಅಭಿಪ್ರಾಯ ಪಡುತ್ತಿದ್ದಾರೆ! ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿ.ಟಿ.ರವಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಿಎಂ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಯಾವ ವಿಚಾರ ಪ್ರಸ್ತಾಪಿಸಲಿದ್ದಾರೆ ಎಂಬುದೇ ಸದ್ಯದ ಕುತೂಹಲವಾಗಿದೆ. ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ, ಸಿಎಂ ಹುದ್ದೆಗೆ …