ಬಂಟ್ವಾಳ : ಎಸ್ ವಿಎಸ್ ಕಾಲೇಜ್ ನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ | ಸಂಚಾಲಕ ಹಾಗೂ ಪ್ರಾಂಶುಪಾಲರನ್ನು ಎತ್ತಂಗಡಿ ಮಾಡಬೇಕು ಎಂದು ಒತ್ತಾಯ
ಬಂಟ್ವಾಳ : ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಕಾಲೇಜಿನ ಅವ್ಯವಸ್ಥೆ ಹಾಗೂ ಆಡಳಿತ ಮಂಡಳಿಯ ವಿರುದ್ಧ ಬಂಟ್ವಾಳದ ಎಸ್ ವಿಎಸ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ ಮಹಿಳಾ ಪ್ರಾಧ್ಯಾಪಕಿಗೆ ಕಿರುಕುಳ ಕೊಟ್ಟು ಬಂಧನಕ್ಕೊಳಗಾಗಿದ್ದ ಎಸ್ ವಿಎಸ್ ಕಾಲೇಜಿನ ಸಂಚಾಲಕ ಪ್ರಕಾಶ್ ಶೆಣೈಯನ್ನು ಹುದ್ದೆಯಿಂದ ತೆಗೆದು ಹಾಕಬೇಕು. ಆತನಿಗೆ ಬೆಂಬಲ ನೀಡುತ್ತಿರುವ ಕಾಲೇಜಿನ ಪ್ರಾಂಶುಪಾಲರನ್ನೂ ಎತ್ತಂಗಡಿ ಮಾಡಬೇಕು ಎಂದು ಒತ್ತಾಯಿಸಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ …