ಶನಿವಾರ, 24 ಅಕ್ಟೋಬರ್ 2026

Robbery case involving breaking into a house where a single woman was staying Accused

Crime

Crime: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ. ದಂಡ!

Crime: ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.