ಕೊತ ಕೊತ ಕುದಿಯುತ್ತಿದೆ ಶ್ರೀಲಂಕಾ !! | ಸರ್ಕಾರದ ಬೆಂಬಲಿಗನನ್ನು ಬಸ್ ನಿಂದ ಕೆಳಗಿಳಿಸಿ ಕಸದಂತೆ ಡಸ್ಟ್ ಬಿನ್ ಗೆ ಎಸೆದ ಆಕ್ರೋಶಿತರು
ಶ್ರೀಲಂಕಾದ ಪರಿಸ್ಥಿತಿ ತುಂಬಾನೇ ಹದಗೆಟ್ಟಿದೆ. ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಪ್ರಧಾನಿ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ ದೇಶಾದ್ಯಂತ ಕಳೆದ ಒಂದು ವಾರದಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಅನೇಕ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ದೇಶದಲ್ಲಿ ಹಿಂಸಾಚಾರದಿಂದಾಗಿ ಐದು ಮಂದಿ ಸಾವನ್ನಪ್ಪಿದ್ದು, 225 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಕೊಲಂಬೊಗೆ ಪ್ರಯಾಣಿಸಲು …