Home Technology Nokia C12 Plus : ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಕಂಪನಿಯಿಂದ ಅನಾವರಣಗೊಂಡ ಆಕರ್ಷಕ...

Nokia C12 Plus : ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಕಂಪನಿಯಿಂದ ಅನಾವರಣಗೊಂಡ ಆಕರ್ಷಕ ಸ್ಮಾರ್ಟ್​ಫೋನ್​!

Nokia C12 Plus

Hindu neighbor gifts plot of land

Hindu neighbour gifts land to Muslim journalist

Nokia C12 Plus : ಇಂದಿನ ಡಿಜಿಟಲ್ ಯುಗದಲ್ಲಿ ಹೊಸ ಹೊಸ ಮಾದರಿಯ ಮೊಬೈಲ್ ಫೋನ್ (Smart phone )ಗಳು ಲಗ್ಗೆ ಇಡುತ್ತಲೇ ಇದ್ದು, ಮೊಬೈಲ್ ಬಳಕೆದಾರರು ಫುಲ್ ಕುಶ್ ಆಗಿದ್ದಾರೆ. ವಿಭಿನ್ನ ಮಾದರಿಯ ಫೀಚರ್ ಗಳ ಮೂಲಕ ಹಲವು ಮೊಬೈಲ್ ಗಳು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಒಂದು ಫೋನ್ ಗಿಂತ ಇನ್ನೊಂದು ಕಮ್ಮಿ ಇಲ್ಲ ಎಂಬಂತೆ ಕಾಂಪಿಟೇಷನ್ ಮೂಲಕ ಜನರಿಗೆ ಪರಿಚಯವಾಗುತ್ತಿದೆ.

ಇದೀಗ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಕಂಪನಿ ಆಕರ್ಷಕ ಸ್ಮಾರ್ಟ್​ಫೋನ್​ ನ್ನು ಅನಾವರಣಗೊಳಿಸಿದೆ. ಹೌದು. ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 12 ಪ್ಲಸ್ (Nokia C12 Plus) ಫೋನನ್ನು ಅನಾವರಣ ಮಾಡಿದೆ.

ಬೆಲೆಗೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್‌ 720*1,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.3-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ವಾಟರ್ ಡ್ರಾಪ್ ಶೈಲಿಯ ಡಿಸ್ ಪ್ಲೇ ಆಗಿದೆ. ಆಕ್ಟಾ-ಕೋರ್ ಯುನಿಸೋಕ್ SoC ಪ್ರೊಸೆಸರ್‌ ಅನ್ನು ಪಡದುಕೊಂಡಿದ್ದು, ಆಂಡ್ರಾಯ್ಡ್ 12 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಭಾರತದಲ್ಲಿ ಸದ್ಯಕ್ಕೆ ಒಂದು ಸ್ಟೋರೆಜ್ ಆಯ್ಕೆಯಲ್ಲಿ ನೋಕಿಯಾ C12 ಪ್ಲಸ್ ಸ್ಮಾರ್ಟ್​ಫೋನ್ ರಿಲೀಸ್ ಆಗಿದೆ. ಇದರ 2GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 7,999 ರೂ. ನಿಗದಿ ಮಾಡಲಾಗಿದೆ. ವಿಶೇಷವಾಗಿ ಈ ಸ್ಮಾರ್ಟ್‌ಫೋನ್‌ 4000mAh ಬ್ಯಾಟರಿಯನ್ನು ಒಳಗೊಂಡಿದ್ದು 10W ಚಾರ್ಜಿಂಗ್ ಅನ್ನು ಬೆಂಬಲಿಸುವ ಸಾಧ್ಯತೆ ಇದೆ. ಕನೆಕ್ಟಿವಿಟ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.2, 3.5mm ಹೆಡ್​ಫೋನ್ ಜ್ಯಾಕ್, FM ರೇಡಿಯೋ ಸೇರಿದಂತೆ ಬೇಸಿಕ್ ಆಯ್ಕೆಗಳಿವೆ.

ಇದರಲ್ಲಿ 8 ಮೆಗಾಪಿಕ್ಸೆಲ್ ರಿಯಲ್ ಕ್ಯಾಮೆರಾ ಸೆನ್ಸಾರ್ ಇದೆ. ಇದು ಅಟೋಫೋಕಸ್ ಫೀಚರ್ ಹೊಂದಿದ್ದು ಮತ್ತು ಎಲ್​ಇಡಿ ಫ್ಲ್ಯಾಶ್ ಅಳವಡಿಸಲಾಗಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕಾಲ್​​ಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆಟಪ್ ನೀಡಲಾಗಿದೆ. ಈ ಫೋನ್ ಯಾವಾಗಿನಿಂದ ಖರೀದಿಗೆ ಸಿಗಲಿದೆ ಎಂಬ ಬಗ್ಗೆ ಕಂಪನಿ ಇನ್ನೂ ಮಾಹಿತಿ ನೀಡಿಲ್ಲ