D.K. Shivakumar: ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್‌ : ನಿವಾಸದ ಮುಂದೆ ಬ್ಯಾನರ್‌ ಫಿಕ್ಸ್‌

Banner fix in front of next DCM DK Shivakumar residence

DK Shivakumar: ಬೆಂಗಳೂರು: ಕರ್ನಾಟಕದ ಮುಂದಿನ ಉಪ ಮುಖ್ಯಮಂತ್ರಿ(ಡಿಸಿಎಂ) ಎಂದು ಹೆಸರಿಸಲಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)  ಅವರ ನಿವಾಸದ ಹೊರಗೆ ಬ್ಯಾನರ್‌ಗಳು ಹಾಕುವ ಮೂಲಕ ರಾರಾಜಿಸುತ್ತಿವೆ ಎಂದು ವರದಿಯಾಗಿದೆ.

ಮೇ. 10 ಕರ್ನಾಟಕ ವಿಧಾನ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರ ಬಂದ ಬೆನ್ನಲ್ಲೆ ಸಿಎಂ ಹುದ್ದೆಗಾಗಿ ಭಾರೀ ಹಣಾಹಣಿ ನಡೆಯಿತು. ದೆಹಲಿಯಲ್ಲಿ ನಡೆದಂತಹ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಮೇ.20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರ ನಿವಾಸದ ಮುಂದೆ ಬೃಹತ್‌ ಗಾತ್ರದ ಬ್ಯಾನರ್ ಗಳನ್ನು ಅಳವಡಿಕೆ ಮಾಡಲಾಗಿದೆ.

 

ಇಂದು ಸಂಜೆ 7ಕ್ಕೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿದ್ದಾರೆ. ಅಲ್ಲದೇ ಮೇ.20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿಯೂ ಬಹಿರಂಗ ವಾಗಿದೆ. ಸಿಎಂ ಹುದ್ದೆಗಾಗಿ ರಣತಂತ್ರ ನಡುವೆ ಅಧಿಕೃತವಾಗಿ ಯಾರು ಸಿಎಂ ಹುದ್ದೆ ಅಲಂಕಾರಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ. ರಾಜ್ಯ ರಾಜಕೀಯದಲ್ಲಿ ಮಹತ್ತರ ತಿರುವು ಪಡೆದುಕೊಳ್ಳಲಿದೆ ಎನ್ನುವುದರಲ್ಲಿ ತಪ್ಪೇನಿಲ್ಲ.

 

ಇದನ್ನು ಓದಿ: D.K.Sivakumar: ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ : ಡಿ.ಕೆ.ಶಿವಕುಮಾರ್‌ 

Leave A Reply

Your email address will not be published.