Home Karnataka State Politics Updates ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ | 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ !!

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ | 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ !!

Hindu neighbor gifts plot of land

Hindu neighbour gifts land to Muslim journalist

ಈ ಬಾರಿಯ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜೂನ್.20ಕ್ಕೆ ಬೆಂಗಳೂರಿಗೆ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ ಬರೋಬ್ಬರಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ ಜೂನ್.21ಕ್ಕೆ ಮೈಸೂರಿಗೆ ಭೇಟಿ ನೀಡಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೂನ್ 20 ರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುವ ಮೋದಿ ಅವರು, ಮೊದಲಿಗೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಕ್ಯಾಂಪಸ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುವುದರ ಜೊತೆಗೆ ಮೆದುಳಿನ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ನಂತರ ಕೆಂಗೇರಿ ಸಮೀಪದ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವರು.

ನಂತರ ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಕ್ಯಾಂಪಸ್‌ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಮಧ್ಯಾಹ್ನ 3.45 ರ ಸುಮಾರಿಗೆ ಬೇಸ್ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಬಳಿಕ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ತಂತ್ರಜ್ಞಾನ ಕೇಂದ್ರಗಳಾಗಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಸಂಜೆ ವೇಳೆಗೆ ಮೈಸೂರಿಗೆ ತೆರಳುವ ಅವರು, ಸುತ್ತೂರು ಮಠಕ್ಕೆ ಭೇಟಿ ನೀಡಿ, ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿಯ ದರ್ಶನದ ಜೊತೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಮತ್ತೊಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಜೂನ್ 21ರಂದು ಮೈಸೂರು ಅರಮನೆ ಮುಂಭಾಗದಲ್ಲಿ ಸುಮಾರು ಒಂದು ಗಂಟೆ ಹದಿನೈದು ನಿಮಿಷಗಳ ಕಾಲ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮೈಸೂರಿನಿಂದ ನವದೆಹಲಿಗೆ ವಿಶೇಷ ವಿಮಾನದಲ್ಲಿ ಬೆಳಿಗ್ಗೆ 9.20 ರ ಸುಮಾರಿಗೆ ಹೊರಡಲಿದ್ದಾರೆ.

ಈ ನಡುವೆ ದೇಶದಾದ್ಯಂತ ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ನಡೆಯದಂತಹ ಕಾರ್ಯಕ್ರಮಗಳು ನಮ್ಮ ರಾಜ್ಯದಲ್ಲಿ ನಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ನಡೆಸಿದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಬಿಬಿಎಂಪಿ, ವಿಧಾನಸಭೆ ಸೇರಿದಂತೆ ಸರಣಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭೇಟಿಯನ್ನು ಯಶಸ್ವಿಗೊಳಿಸಲು ಬಿಜೆಪಿಯ ನಾಯಕರು ಉತ್ಸಾಹ ತೋರಿದ್ದಾರೆಂದು ವರದಿಗಳು ತಿಳಿಸಿವೆ.